ಪುತ್ತೂರು: ಎನ್ಆರ್ಎಲ್ಎಂ ಯೋಜನೆಯ ಕಟ್ಟಡಕ್ಕೆ ನಿರ್ಮಾಣಕ್ಕೆ ಬನ್ನೂರಿನ ಬೀರಿಗದಲ್ಲಿ ಶನಿವಾರ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು.
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು. ಎನ್ಆರ್ಎಲ್ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟ ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಹಲವು ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಬೀರಿಗದಲ್ಲಿ ಕಟ್ಟಡಕ್ಕೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಸುಮಾರು ೧೮.೫ ಲಕ್ಷ ರೂ. ವೆಚ್ಚದಲ್ಲಿ ಯೋಜನೆಯು ಕಾರ್ಯಗತಗೊಳ್ಳಲಿದೆ.