ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಕರೆ ಮೂಹೂರ್ತ

ಪುತ್ತೂರು : ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಡಿ. 12ರಂದು ಕರೆ ಮುಹೂರ್ತ ನಡೆಯಿತು. ಜ. 28 ಮತ್ತು 29ರಂದು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ 30ನೇ ವರ್ಷದ ಕಂಬಳ ಈ ಬಾರಿ ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಂಬಳ ಸಮಿತಿ ಸಂಚಾಲಕ ಸುಧಾಕರ ಶೆಟ್ಟಿ ನೇತೃತ್ವದಲ್ಲಿ ಮೂಲ ನಾಗನ ಕಟ್ಟೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರು ಹಾರೆಯ ಮೂಲಕ ಮಣ್ಣು ತೆಗೆದು, ಕರೆ ಮುಹೂರ್ತಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ಪ್ರಧಾನ ಕಾರ್ಯದರ್ಶಿ ಪಿ.ವಿ. ದಿನೇಶ್ ಕುಲಾಲ್, ಕೋಶಾಧಿಕಾರಿ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷ ವಸಂತ್ ಕುಮಾರ್ ರೈ ಜೆ.ಕೆ., ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ ಮುರ, ಜೋಕಿಂ ಡಿಸೋಜ, ಜತೆಕಾರ್ಯದರ್ಶಿ ಬಿ.ಪ್ರೇಮಾನಂದ ನಾಕ್, ಪ್ರವೀಣ್ ಶೆಟ್ಟಿ ಅಳಕೆಮಜಲು, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಸುಧಾಕರ ಶೆಟ್ಟಿ ಬೀಡಿನಮಜಲು, ರೋಶನ್ ರೈ ಬನ್ನೂರು, ಮುರಳೀಧರ ರೈ ಮಠಂತಬೆಟ್ಟು, ರೋಶನ್ ರೈ ಬನ್ನೂರು, ಉಮೇಶ್ ಕರ್ಕೆರ, ಕೃಷ್ಣಪ್ರಸಾದ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು. ಸಮಿತಿ ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top