ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್‌ನಿಂದ 2022-23ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ ಹರಿಪ್ರಸಾದ್

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟç ನಿರ್ಮಾಣದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವ ಗುರಿಯನ್ನು ಅದು ಹೊಂದಿದೆ. ವಿದ್ಯಾರ್ಥಿಗಳ ಬದುಕಿಗೊಂದು ಸ್ಪಷ್ಟ ಸ್ವರೂಪವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವವು ಎನ್‌ಎಸ್‌ಎಸ್‌ನಿಂದ ಅಭಿವೃದ್ಧಿಯಾಗುತ್ತದೆ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹೇಳಿದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ 2022ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ, ಯಶಸ್ವಿ ಜೀವನಕ್ಕೆ ದಾರಿದೀಪವಾಗಿ ರಾಷ್ಟ್ರೀಯ ಸೇವಾ ಯೋಜನೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಹೇಗೆ ತಮ್ಮ ಜೀವನವನ್ನು ರೂಪಿಸಬೇಕೆಂದು ಬದುಕಲು ಕಲಿಸುವ ಗರಡಿಮನೆಯಾಗಿ ಇಂದು ಎನ್‌ಎಸ್‌ಎಸ್ ಕಾರ್ಯ ನಿರ್ವಹಿಸುತ್ತಿದೆ. ಎನ್‌ಎಸ್‌ಎಸ್ ಘಟಕಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವಗುಣ, ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಯನ್ನು ರೂಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದರು.































 
 

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಮಾತನಾಡಿ, ಕಲಿಕಾ ಸಮಯದಲ್ಲಿ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಕೊಂಡು ಅಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಆತನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎನ್ನುವುದಕ್ಕೆ ಜೀವಂತ ನಿದರ್ಶನವೇ ಎನ್.ಎಸ್.ಎಸ್. ‘ನನಗಲ್ಲ ನಿನಗೆ’ ಎಂಬ ಧ್ಯೇಯ ವಾಕ್ಯದೊಂದಿಗೆ ‘ಸೇವೆಯ ಮೂಲಕ ಶಿಕ್ಷಣ – ಶಿಕ್ಷಣದ ಮೂಲಕ ಸೇವೆ’ ಎಂಬ ಮೂಲಮಂತ್ರವನ್ನು ಎನ್.ಎಸ್.ಎಸ್. ಹೊಂದಿದೆ ಎಂದ ಅವರು ಎನ್‌ಎಸ್‌ಎಸ್ ಘಟಕದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸೂಚಿಸಿದರು.

ಇದೇ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ `ಸೇವಾಬಿಂಬ’ ಬಿತ್ತಿಪತ್ರಿಕೆಯ ಈ ಶೈಕ್ಷಣಿಕ ವರ್ಷದ ಮೊದಲ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಲಕ್ಷ್ಮೀಕಾಂತ ಎ ಪ್ರಾಸ್ತವಿಕವಾಗಿ ಮಾತನಾಡಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಧ್ಯೇಯ ಹಾಗೂ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ನಂತರ ಎನ್.ಎಸ್.ಎಸ್ ಸ್ವಯಂಸೇವಕರಿಗೆ “ಎನ್.ಎಸ್.ಎಸ್ ಸ್ವಯಂಸೇವಕರ ಕರ್ತವ್ಯಗಳು ಮತ್ತು ಅವಕಾಶಗಳು” ಎಂಬ ವಿಷಯದ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹಾಗೂ ಬಿಕಾಂ ವಿದ್ಯಾರ್ಥಿ ಸಾರ್ಥಕ್ ಟಿ ಕಾರ್ಯಾಗಾರ ನಡೆಸಿದರು. ಎನ್‌ಎಸ್‌ಎಸ್ ಸ್ವಯಂಸೇವಕರಾದ ಅಭಿಜಿತ್ ವಿಭಾಸ್ ಸ್ವಾಗತಿಸಿ, ಎನ್‌ಎಸ್‌ಎಸ್ ಘಟಕದ ನಾಯಕಿ ವೃಂದಾ ಭಂಡಾರಿ ವಂದಿಸಿದರು. ಕಾರ್ಯಕ್ರಮವನ್ನು ಸ್ವಯಂಸೇವಕರಾದ ನವನೀತ್ ಡಿ.ಕೆ ಹಾಗೂ ನೇಮಿಕಾ ಸಾಂತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top