ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ ಎಂದ ಅವರು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಹಾರೈಸಿದರು.

 
 





























ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ. ಸ್ವಾಗತಿಸಿ, ಸೃಷ್ಟಿ ವಂದಿಸಿದರು. ವಿದ್ಯಾರ್ಥಿನಿ ಪ್ರಗತಿ ಕೆ.ಹೆಚ್. ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top