ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹಿಂದು ಜನಜಾಗೃತಿ ಸಮಿತಿ ಆಗ್ರಹ | ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ

ಪುತ್ತೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ವಿಶೇಷ ’ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ಸ್ಥಾಪಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಡಿ. 15ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಹಿಂದು ಜನಜಾಗೃತಿ ಸಮಿತಿ ಹಮ್ಮಿಕೊಂಡ ಪ್ರತಿಭಟನೆ ವೇಳೆ, ಈ ಆಗ್ರಹ ಕೇಳಿಬಂದಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಿನೇಶ್ ಜೈನ್, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದೇ ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್‌ದಳವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿದರು.





































 
 

ಹಿಂದೂ ಜನಜಾಗೃತಿ ಸಮಿತಿ ಉಜಿರೆ ಘಟಕ ಸಮನ್ವಯಕಾರ ದಾಮೋದರ್ ಮಾತನಾಡಿ, ದೆಹಲಿಯ ಜಿಹಾದಿ ಆಫ್ತಾಬ್ ಹಿಂದೂ ಯುವತಿಯನ್ನು 30 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿವೆ. ಕರ್ನಾಟಕದಲ್ಲಿ 2014ರಿಂದ 2019ರವರೆಗೆ 21,000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲಾ ಗಂಭೀರ ಘಟನೆಗಳನ್ನು ಗಮನಕ್ಕೆ ತೆಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ’ಲವ್ ಜಿಹಾದ್’ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು. ’ಲವ್ ಜಿಹಾದ್’ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ’ಪೊಲೀಸ್ ವಿಶೇಷ ಶಾಖೆ’ಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಹಿಂದೂ ಜನಜಾಗೃತಿ ಸಮಿತಿಯ ದಯಾನಂದ, ಬಾಲಕೃಷ್ಣ ನೆಲ್ಯಾಡಿ, ಹರಿಪ್ರಸಾದ್ ನೆಲ್ಲಿಕಟ್ಟೆ, ಬಿಜೆಪಿ ಪ್ರಮುಖ ಸತೀಶ್ ನಾಯ್ಕ್ ಸಹಿತ ಹಲವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top