ಮಂಗಳೂರು : ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ಕಟ್ಟಿಹಾಕಿ ಥಳಿಸಿದ ಘಟನೆ ಮೂಲ್ಕಿಯಲ್ಲಿ ಶನಿವಾರ ಸಂಭವಿಸಿದೆ. ಯುವಕನೊಬ್ಬ ಡಿ.13ರಂದು ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ. ಇದನ್ನು ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ಇದೇ ಯುವಕ ಶನಿವಾರ ಮತ್ತೆ ಬೈಕಿನಲ್ಲಿ ಆ ಜಾಗಕ್ಕೆ ಬಂದಿದ್ದ. ಇದನ್ನು ಗಮನಿಸಿದ ಬಾಲಕಿಯ ಕಡೆಯವರು ಯುವಕನನ್ನು ಹಿಡಿದು ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರ ವಶಕ್ಕೊಪ್ಪಿಸಿ ಪೋಕ್ಸೊ ಕೇಸು ದಾಖಲಿಸಿದ್ದಾರೆ. ಇದೇ ವೇಳೆ ಆರೋಪಿ ಕೂಡ ತನ್ನ ಮೇಲೆ ಹಲ್ಲೆ ಮಾಡಿದ ಕುರಿತು ಪ್ರತಿದೂರು ದಾಖಲಿಸಿದ್ದಾನೆ.
ಬಾಲಕಿಗೆ ಕಿರುಕುಳ: ಯುವಕನನ್ನು ಕಟ್ಟಿ ಹಾಕಿ ಹಲ್ಲೆ
