ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲಕ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತು ಇನ್ಶೂರೆನ್ಸ್ ಕಂಪೆನಿ ಆಪ್ಟ್ ನ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಡಿ. 11ರಂದು ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ ನಡೆಯಿತು.
ಆಪ್ಟಮ್ ಕಂಪೆನಿಯು 125000 ಉದ್ಯೋಗಿಗಳಿರುವ ಬಹುರಾಷ್ಟ್ರೀಯ ಸಂಸ್ಥೆಯಾಗಿದ್ದು, ಪ್ರಸ್ತುತ ಬೆಂಗಳೂರಿನ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ. ಪ್ರಸ್ತುತ ವರ್ಷದಲ್ಲಿ ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಅವಶ್ಯಕತೆಯಿದ್ದು, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಕಾಲೇಜುಗಳಲ್ಲಿ ಸಂದರ್ಶನಗಳನ್ನು ಆಯೋಜಿಸುತ್ತಿದೆ.
ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೋ, ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಡಾ| ರಾಧಾಕೃಷ್ಣ ಗೌಡ ಉಪಸ್ಥಿತರಿದ್ದರು.