ಪುತ್ತೂರು: ಚೀನಾದಲ್ಲಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದಾಗಿ ಪಕ್ಕದ ದೇಶಗಳು ಜಾಗೃತಗೊಳ್ಳುತ್ತಿದ್ದು, ಕರ್ನಾಟಕದಲ್ಲೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ಕರೆದಿದ್ದಾರೆ.
ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ನಡೆಸಿ, ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಇಲ್ಲದೇ ಇದ್ದರೂ, ಸೋಂಕು ಮತ್ತೆ ಉಲ್ಬಣಗೊಳ್ಳದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಸಭೆ ಕರೆದಿದ್ದಾರೆ.