ಬೆಳಗಾವಿ: ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95 ಮತ್ತು 96ಕ್ಕೆ ತಿದ್ದುಪಡಿ ತರುವ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ 1964ನ್ನು ಕಂದಾಯ ಸಚಿವ ಆರ್.ಅಶೋಕ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಈ ತಿದ್ದುಪಡಿ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕೆಎಲ್‌ಆರ್ ಕಾಯಿದೆಯ ಸೆಕ್ಷನ್ 95ರ ಉಪ-ವಿಭಾಗ (2)ನ್ನು ತಿದ್ದುಪಡಿ ಮಾಡಲು ಮಸೂದೆಯು ಪ್ರಸ್ತಾಪಿಸುತ್ತದೆ, ಕೃಷಿಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಪರಿವರ್ತಿಸಲು ಬಯಸಿದರೆ ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಫಿಡವಿಟ್ ಸಲ್ಲಿಸಬಹುದು. ಜಮೀನು ಪರಭಾರೆಯಾಗಿದೆ ಎಂದು ಪರಿಗಣಿಸಿ ಅರ್ಜಿ ಸ್ವೀಕರಿಸಿದ ಏಳು ದಿನಗಳಲ್ಲಿ ಡಿಸಿ ಅನುಮೋದನೆ ನೀಡುವ ಅಂಶ ಮಸೂದೆಯಲ್ಲಿದೆ.