ಪುತ್ತೂರು: ಸುಳ್ಯ ತಾಲೂಕಿನಲ್ಲಿ ಸಮುದಾಯ ಸಮ್ಮಿಲನ ಕಾರ್ಯಕ್ರಮ ನಡೆಸುತ್ತಿರುವ ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಗುರುವಾರ ಪಂಜದಲ್ಲಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. ಪಂಜ ಆಸುಪಾಸಿನ ಆರು ಗ್ರಾಮಗಳ ಜನರು ಕಾರ್ಯಕ್ರಮದಲ್ಲಿ ಸೇರಿದ್ದರು.

