ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್‌ ಸ್ಟೇಟ್ಸ್‌ ಮೂಲದ ಬಹುರಾಷ್ಟ್ರೀಯ ಹೆಲ್ತ್‌ ಕೇರ್‌ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್‌ ಕೋಡರ್‌ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ ಕೆಲವು ಕೌಶಲ್ಯಗಳನ್ನು ಅಭಿವೃದ್ಧಿಗೊಳಿಸಬೇಕಾದುದು ಇತ್ತೀಚಿನ ದಿನಗಳಲ್ಲಿ ಅಗತ್ಯ. ಅಭ್ಯರ್ಥಿಗಳು ಅರ್ಹರಾಗಿದ್ದಲ್ಲಿ ಅವಕಾಶಗಳು ಅರಸಿಕೊಂಡು ಬರುತ್ತವೆ  ಎಂದು ಹೇಳಿದರು.

ಆಪ್ಟಮ್‌ ಕಂಪನಿಯ ಪೀಪಲ್‌ ಮ್ಯಾನೇಜರ್‌ ಮೆಲಿಟಾ ಲೋಬೋ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಈ ರೀತಿಯ ತರಬೇತಿ ಕಾರ್ಯಕ್ರಮಗಳು ನಮ್ಮಲ್ಲಿರುವ ಪ್ರತಿಭೆಗಳನ್ನು ಹೊರತರುವಲ್ಲಿ ಸಹಕಾರಿ ಆಗಿರುತ್ತವೆ. ನಮ್ಮ ಕಾರ್ಯದ ಒತ್ತಡವೆಷ್ಟೇ ಇದ್ದರೂ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲೇಬೇಕು. ಆದರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.































 
 

ತರಬೇತಿಯಲ್ಲಿ ಭಾಗವಹಿಸಿದ ಅಲೀಫಿಯಾ, ಜೋಯ್‌ಲಿನ್ ಅನುಭವವನ್ನು ಹಂಚಿಕೊಂಡರು. ಹೃಶಿತಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ಪ್ಲೇಸ್‌ಮೆಂಟ್‌ ಅಧಿಕಾರಿ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶದ ಸದಸ್ಯ ಜೋನ್ಸನ್‌ ಡೇವಿಡ್‌ ಸಿಕ್ವೇರಾ ವಂದಿಸಿದರು. ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಕಂಪನಿಗೆ ಆಯ್ಕೆಯಾದ 42 ಅಭ್ಯರ್ಥಿಗಳಿಗೆ 5 ವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಕಂಪನಿಯ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಕಾಲೇಜಿನಲ್ಲಿ 5 ವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಎಎಪಿಸಿಯ ಸಿಪಿಸಿ ಪ್ರಮಾಣೀಕರಣ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ. ಸಿಪಿಸಿ ಪ್ರಮಾಣೀಕರಣ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಆಪ್ಟಮ್‌ ಕಂಪನಿಯಲ್ಲಿ ಅಂತಿಮ ಸುತ್ತಿನ ಸಂದರ್ಶನವಿದ್ದು, ಈ ಸಂದರ್ಶನದಲ್ಲಿ ಕಂಪನಿಯ ನೇಮಕಾತಿ ಪತ್ರವನ್ನು ನೀಡಲಾಗುವುದು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top