ಪುತ್ತೂರು: ಭಾರತದ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಡಿ. 22ರಂದು ರಾಷ್ಟ್ರೀಯ ಗಣಿತ ಶಾಸ್ತ್ರ ದಿನವಾಗಿ ಆಚರಿಸುತ್ತಿದ್ದು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ರಾಮಾನುಜನ್ ರವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ, ವಿದ್ಯಾರ್ಥಿಗಳಿಗಾಗಿ ಸೆಮಿನಾರ್, ರಸಪ್ರಶ್ನೆ ಸ್ಪರ್ಧೆ ಕಾಲೇಜಿನಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಲಾರೆನ್ಸ್ ಮಸ್ಕರೇಞಸ್ ಮಾತನಾಡಿ, ವಿದ್ಯಾರ್ಥಿಗಳು ಗಣಿತದಲ್ಲಿ ಮಹತ್ವದ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು.
ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ಗಣಿತ ಕ್ಷೇತ್ರದ ದಿಗ್ಗಜರಾಗಿದ್ದ ಶ್ರೀನಿವಾಸ ರಾಮಾನುಜನ್‌ರ ಕೊಡುಗೆಗಳನ್ನು ಸ್ಮರಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ| ಗಣೇಶ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಉಪನ್ಯಾಸಕಿ ಸಮ್ರತಾ ಸ್ವಾಗತಿಸಿ, ತನುಜಾ ವಂದಿಸಿದರು. ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ| ಸ್ಟ್ಯಾನಿ ಪಿಂಟೋ ಹಾಗೂ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.