ಮಾಸ್ಕೊ: ರಶ್ಯದ ಸೈಬೀರಿಯಾ ಪ್ರಾಂತದ ಕೆಮೆರೊವೊ ನಗರದ ವೃದ್ಧಾಶ್ರಮದಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ದುರಂತದಲ್ಲಿ 20 ಮಂದಿ ಮೃತಪಟ್ಟಿರುವುದಾಗಿ ತಾಸ್ ಸುದ್ಧಿಸಂಸ್ಥೆ ವರದಿ ಮಾಡಿದೆ.
ಕಟ್ಟಡದ ಎರಡನೇ ಮಹಡಿ ಬೆಂಕಿಯಿಂದ ಸಂಪೂರ್ಣ ಸುಟ್ಟುಹೋಗಿದೆ. ಅಗ್ನಿಶಾಮಕ ಸಿಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ 20 ಮಂದಿ ಮೃತಪಟ್ಟಿದ್ದಾರೆ. ತಾಪಮಾನ ಕನಿಷ್ಟ ಮಟ್ಟಕ್ಕೆ ಇಳಿದಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ‘ತಾಸ್’ ವರದಿ ಮಾಡಿದೆ.