ಕೋವಿಡ್ ಮುನ್ನೆಚ್ಚರಿಕೆ ಪಾಲಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೋವಿಡ್ ಸೋಂಕಿನ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಚೀನಾ, ಅಮೆರಿಕ ಮೊದಲಾದ ದೇಶಗಳಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಇದರಂತೆ ದ.ಕ. ಜಿಲ್ಲೆಯಲ್ಲೂ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

  • ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿ ಇರುವೆಡೆ ಮಾಸ್ಕ್ ಧಾರಣೆ ಅಗತ್ಯ.
  • ಹೊಸ ವರ್ಷಾಚರಣೆ ಸಂದರ್ಭ ಎಚ್ಚರಿಕೆ ಅವಶ್ಯ.
  • ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭ ಮಾಸ್ಕ್ ಧಾರಣೆ ಅಗತ್ಯ.
  • ವೃದ್ಧರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು.
  • ಅರ್ಹರೆಲ್ಲರೂ ಕೋವಿಡ್-೧೯ ಲಸಿಕೆಯ ಪ್ರಿಕಾಶನರಿ ಡೋಸನ್ನು ಶೀಘ್ರ ತೆಗೆದುಕೊಳ್ಳಬೇಕು.
  • ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-೧೯ ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು.
  • ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ಪ್ರಾಣಾಯಾಮ, ವ್ಯಾಯಾಮ, ಉಸಿರಾಟದ ವ್ಯಾಯಾಮ, ಧ್ಯಾನ ಮಾಡಬಹುದು.
  • ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ.
  • ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು.
  • ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top