ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೊಡ್ಡ ರಂಗಪೂಜೆ, ಶ್ರೀ ದೇವರ ಕಿರುಷಷ್ಠಿ ಉತ್ಸವ ಮತ್ತು ಶ್ರೀ ವ್ಯಾಘ್ರ ಚಾಮುಂಡಿ ನೇಮೋತ್ಸವ ಡಿ. 27, 28, 29ರಂದು ನಡೆಯಲಿದೆ.
ಡಿ. 27ರಂದು ಬೆಳಗ್ಗಿನಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಉಗ್ರಾಣ ಪೂಜೆ, ಸಂಜೆ 6ಕ್ಕೆ ಗಣೇಶ ಪ್ರಾರ್ಥನೆ, ಬಳಿಕ ದೀಪಾರಾಧನೆ, ದೊಡ್ಡ ರಂಗಪೂಜೆ ನಡೆಯಲಿದೆ.
ಡಿ. 28ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪವಮಾನಾಭಿಷೇಕ, ನಾಗದೇವರಿಗೆ ಆಶ್ಲೇಷ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ 12ಕ್ಕೆ ತುಲಾಭಾರ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ರಾತ್ರಿ ಗಂಟೆ 6.30ಕ್ಕೆ ದುರ್ಗಾಪೂಜೆ, ರಾತ್ರಿ ಗಂಟೆ 7ಕ್ಕೆ ಶ್ರೀ ದೇವರ ಬಲಿ ಹೊರಟು ಪೆರಿಯ ಬಲಿ ಉತ್ಸವ, ಕಟ್ಟೆ ಪೂಜೆ, ಕೇರಳ ಸಂಪ್ರದಾಯದ ನೃತ್ಯಬಲಿ ಸೇವೆ, ನಂತರ ಮೇಲ್ಮಜಲಿನಲ್ಲಿ ಸಾರ್ವಜನಿಕ ಕಟ್ಟೆಪೂಜೆ, ಬಳಿಕ ಸಂಪ್ಯ ಶ್ರೀ ಗಣೇಶ ಸುಬ್ರಹ್ಮಣ್ಯ ಕಟ್ಟೆಗೆ ಶ್ರೀ ದೇವರ ಸವಾರಿ ನಡೆಯಲಿದೆ.
ಡಿ. 29ರಂದು ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಗಂಧ-ಪ್ರಸಾದ, ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆ, ಮಧ್ಯಾಹ್ನ 1ರಿಂದ ಶ್ರೀ ವ್ಯಾಘ್ರ ಚಾಮುಂಡಿ ನೇಮೋತ್ಸವ, ಗುಳಿದ ದೈವಕ್ಕೆ ತಂಬಿಲ ನಡೆಯಲಿದೆ.
ಡಿ. 14ರಂದು ಬೆಳಿಗ್ಗೆ ಗಂಟೆ 10ಕ್ಕೆ ಶ್ರೀ ದೇವರ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.