ಡಿ. ೨೯: ಅರಣ್ಯ ಇಲಾಖೆ ಅಧಿಕಾರಿ ವಜಾಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

೫ ಪೊಲೀಸ್ ಠಾಣೆ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ

ಪುತ್ತೂರು: ಭಜನೆ ಹಾಗೂ ಭಜಕರ ಹಾಗೂ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟ್ ಹಾಕುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಯನ್ನು ಅಮಾನತುಗೊಳಿಸದಿದ್ದರೆ ಡಿ. ೨೯ರಂದು ಬೆಳಿಗ್ಗೆ ೧೦ಕ್ಕೆ ಪುತ್ತೂರು ಜಿಲ್ಲಾ ವ್ಯಾಪ್ತಿಯ ಪುತ್ತೂರು ನಗರ, ಉಪ್ಪಿನಂಗಡಿ, ಬೆಳ್ಳಾರೆ, ಸುಳ್ಯ, ಕಡಬ, ಬೆಳ್ತಂಗಡಿ ಠಾಣಾ ಮುಂಭಾಗ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದು ಪರಿಷದ್, ಭಜರಂಗದಳ ಪುತ್ತೂರು ಜಿಲ್ಲೆ ಪ್ರಕಟಣೆ ನೀಡಿದೆ.


ಅರಣ್ಯ ಇಲಾಖೆಯ ಅಧಿಕಾರಿ ಸಂಜೀವ ಅವರನ್ನು ಡಿ. ೨೮ರ ಸಂಜೆ ಒಳಗೆ ಅಮಾನತು ಮಾಡಬೇಕು ಎಂದು ಆಗ್ರಹಿಸಲಾಗಿದೆ. ಈಗಾಗಲೇ ಸಂಜೀವ ಕಾಣಿಯೂರು ವಿರುದ್ಧ ಪ್ರಕರಣ ದಾಖಲಾಗಿದೆ. ಆದರೂ ಬಂಧನ ಅಥವಾ ಕೆಲಸದಿಂದ ವಜಾ ಮಾಡಿಲ್ಲ. ಆದ್ದರಿಂದ ಏಕಕಾಲದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top