ಗ್ಯಾಂಬಿಯಾ ಬಳಿಕ ಉಜ್ಬೇಕಿಸ್ಥಾನ ಆರೋಪ
ತಾಷ್ಕೆಂಟ್: ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್ನ ಪಾತ್ರವಿದೆ ಎಂದು ಉಜ್ಬೇಕಿಸ್ಥಾನ ಆರೋಪಿಸಿದೆ.ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಮಾಡಲಾಗಿತ್ತು. ಇದೀಗ ಉಜ್ಬೇಕಿಸ್ಥಾನ ಕೂಡ ಇದೇ ರೀತಿಯ ಆರೋಪ ಮಾಡಿದೆ.
ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ. 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ಥಾನದ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಿರಪ್ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೆ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಹೇಳಿದೆ.