ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಭಜನೆ, ಪ್ರಾರ್ಥನೆಗೆ ಮಹತ್ವವಿದೆ:
ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್ ಮಾತನಾಡಿ, ಗಾಂಧೀಜಿ ಹೇಳಿರುವಂತೆ ಭಜನೆ ಹಾಗೂ ಪ್ರಾರ್ಥನೆಗೆ ಅದರದ್ದೆ ಆದ ಮಹತ್ವವಿದೆ. ನಮ್ಮ ಸಂಸ್ಕೃತಿ ಉಳಿವಿಗಾಗಿ ಭಜನಾ ಕಾರ್ಯ ಮಾಡುವುದು ಉತ್ತಮ ಕೆಲಸ. ಯಾವಾಗಲು ಅಪರಾಧ ಪ್ರಕರಣಗಳನ್ನು ದಾಖಲಿಸುವ ಠಾಣೆಯಲ್ಲಿ ಕಾರ್ಯಕರ್ತರು ಭಜನೆ ಮಾಡಿದ್ದು ತುಂಬಾ ಸಂತೋಷದ ವಿಷಯ ಎಂದರು.ಅಪರಾಧ ತಡೆಗಟುವಲ್ಲಿ ತಮ್ಮ ಸಹಕಾರ ಅತ್ಯಗತ್ಯ.ಮೊಬೈಲ್, ತಂತ್ರಜ್ಞಾನ ಅಭಿವೃದ್ಧಿ ಆಗುತ್ತಿದ್ದಂತೆ, ಅಪರಾಧಗಳು ಹೆಚ್ಚಾಗಿ ನಡೆಯುತ್ತವೆ. ಇವುಗಳನ್ನು ತಡೆಗಟುವಲ್ಲಿ ಯುವಕರ ಸಹಕಾರ ಅಗತ್ಯ ಎಂದರು.
ಸಭೆಯಲ್ಲಿ ಉಪನಿರೀಕ್ಷಕ ಶ್ರೀಕಾಂತ್ ರಾಥೋಡ್, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್., ಹಿಂದೂ ಪರಿಷತ್ ಜಿಲ್ಲಾ ಪ್ರಚಾರ ಪ್ರಮುಖ್ ಶ್ರೀಧರ್ ತೆಂಕಿಲ, ಹಿಂದೂ ಮುಖಂಡ ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರ್ ಪಂಜ, ಹರೀಶ್ ದೋಲ್ಪಾಡಿ, ಅಜಿತ್ ಕೆಯ್ಯೂರು, ಪ್ರವೀಣ್ ಕಲ್ಲೇಗ ಮೊದಲಾಸ ಕಾರ್ಯಕರ್ತರು ಉಪಸ್ಥಿತರಿದ್ದರು.