ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ 2022ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸುಗಳನ್ನು 2023ರ ಫೆ. 28ರವರೆಗೆ ಮಾನ್ಯ ಮಾಡಲಾಗಿದೆ.
ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ ಅಥವಾ ಹೊಸ ಪಾಸು ಪಡೆಯುವ ಫಲಾನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜಿನ ಫೊಟೋ, ಯಡಿಐಪಿ ಗುರುತಿನ ಚೀಟಿಯನ್ನು ಆನ್ ಲೈನಿನಲ್ಲಿ ಅಪ್ಲೋಡ್ ಮಾಡಬೇಕು.
ಹೊಸದಾಗಿ ಪಾಸ್ ಪಡೆಯುವವರು ಪುತ್ತೂರು ವಿಭಾಗೀಯ ಕಚೇರಿಯಲ್ಲಿ ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಸೈಜಿನ 2 ಫೊಟೋ, ಅಂಚೆ ಚೀಟಿ ಗಾತ್ರದ 1 ಫೊಟೋ, ಯುಡಿಐಡಿ ಗುರುತಿನ ಚೀಟಿಯ ಮಾನ್ಯತಾ ಅವಧಿಯನ್ನು ಪರಿಶೀಲನೆಯ ಉದ್ದೇಶಕ್ಕಾಗಿ ತೋರಿಸತಕ್ಕದ್ದು. ಅಲ್ಲದೇ 660 ರೂ.ವನ್ನು ಪಾವತಿ ಮಾಡಿ ಪಾಸ್ ಪಡೆದುಕೊಳ್ಳಬಹುದು ಎಂದು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.