ಬೆಂಗಳೂರು: ಮಂಡ್ಯದ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ವತಿಯಿಂದ ನೂತನವಾಗಿ ನಿರ್ಮಿಸಿರುವ ಮೆಗಾ ಡೈರಿ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಆಶೀರ್ವಚನ ನೀಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಗೋಪಾಲಯ್ಯ, ಎಸ್.ಟಿ. ಸೋಮಶೇಖರ್, ನಾರಾಯಣಗೌಡ, ಶಾಸಕರಾದ ಪುಟ್ಟರಾಜು, ಸುರೇಶ ಗೌಡ, ತಮ್ಮಣ್ಣ, ಹಾಲು ಮಂಡಳಿ ಅಧ್ಯಕ್ಷರು, ನಿರ್ದೇಶಕರು ಮೊದಲಾದವರು ಉಪಸ್ಥಿತರಿದ್ದರು.


