2024ರಲ್ಲೂ ರಾಹುಲ್‌ ಗಾಂಧಿಯೇ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ

ಹಿರಿಯ ನಾಯಕ ಕಮಲನಾಥ್‌ ಘೋಷಣೆ

ಹೊಸದಿಲ್ಲಿ : 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಹೇಳಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ಕಮಲನಾಥ್ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಅವರು ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ. ಅವರು ಪ್ರಧಾನಿ ಅಭ್ಯರ್ಥಿಯೂ ಆಗಿರುತ್ತಾರೆ ಎಂದು ಕಮಲನಾಥ್ ಹೇಳಿದ್ದಾರೆ. ಜಗತ್ತಿನ ಇತಿಹಾಸದಲ್ಲಿ ಯಾರೂ ಇಷ್ಟು ಸುದೀರ್ಘ ‘ಪಾದಯಾತ್ರೆ’ಯನ್ನು ಕೈಗೊಂಡಿಲ್ಲ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆ ಯಾವ ಕುಟುಂಬವೂ ದೇಶಕ್ಕಾಗಿ ಇಷ್ಟೊಂದು ತ್ಯಾಗ, ಬಲಿದಾನ ಮಾಡಿಲ್ಲ ಎಂದಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ ಕಾಂಗ್ರೆಸ್​ನ ಏಕೈಕ ನಾಯಕ ಕಮಲನಾಥ್.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top