ಪುತ್ತೂರು: ಕುಟ್ಟಿನೋಪಿನಡ್ಕ ಪ್ರಾಥಮಿಕ ಶಾಲಾ ತರಗತಿ ಕಟ್ಟಡಕ್ಕೆ ಮಂಜೂರಾದ 13.90 ಲಕ್ಷ ರೂ.ನ ಕಾಮಗಾರಿಗೆ ಶಿಲಾನ್ಯಾಸ ಹಾಗೂ 3.30 ಲಕ್ಷ ರೂ.ನ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಿಗೆ ಉಚಿತ ಶಿಕ್ಷಣ, ಉಚಿತ ಬಿಸಿಊಟ, ಉಚಿತ ಸಮವಸ್ತ್ರ, ಪೌಸ್ಟಿಕ ಆಹಾರ, ಪ್ರತಿಭಾವಂತ ಅಧ್ಯಾಪಕರು, ನೂತನ ಶಾಲಾ ಕೊಠಡಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಗ್ರಾಮೀಣ ಮಕ್ಕಳ ಭವಿಷ್ಯದ ದೃಷ್ಠಿಯಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಿಯೂ ನೀಡದ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಪುತ್ತೂರು ತಾಲೂಕಿಗೆ 5 ಕೋಟಿ ರೂ. ವೆಚ್ಚದಲ್ಲಿಒದಗಿಸಲಾಗಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪರ್ಪುಂಜ, ನಿತೀಶ್ ಶಾಂತಿವನ, ಜಯಂತ್, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಕ್ಷದ ಪ್ರಮುಖರು, ಸಾರ್ವಜನಿಕರು, ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.