ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ಗೆ ಗ್ರಂಥಾಲಯ ಕೊಠಡಿ, ಮಾಹಿತಿ ಕೇಂದ್ರ ಕಟ್ಟಡಕ್ಕೆ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭ ಸಾರ್ವಜನಿಕ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಸಲಾಯಿತು.
ಬಳಿಕ ಮಾತನಾಡಿದ ಶಾಸಕರು, ಅಮೃತ ಗ್ರಾಮ ಯೋಜನೆಯಡಿ ಒಟ್ಟು 27 ಲಕ್ಷದ 25 ಸಾವಿರ ರೂ. ಮಂಜೂರಾಗಿದ್ದು, ಇದರಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಆಗಲಿದೆ. ಈ ಮೂಲಕ ಆಧುನಿಕತೆಗೆ ಗ್ರಂಥಾಲಯದ ಸ್ಪರ್ಶ ನೀಡುವ ಕೆಲಸ ಇಲ್ಲಿ ನಡೆಯುತ್ತಿದೆ. ಸಾಮಾಜಿಕ ಜಾಲತಾಣ, ಮೊಬೈಲ್ ಎಷ್ಟೇ ಮುಂದುವರಿಯಲಿ ಪುಸ್ತಕ ಮಹತ್ವ ಎಂದಿಗೂ ಕಡಿಮೆಯಾಗದು. ಅಲ್ಲದೇ, ಸಾಮಾಜಿಕ ಪರಿವರ್ತನೆಯಲ್ಲಿ ಪುಸ್ತಕಗಳ ಪಾತ್ರ ಮಹತ್ವದ್ದು ಎಂದ ಅವರು, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅನ್ನು ಮಾದರಿಯಾಗಿ ರೂಪಿಸುವ ಹಿನ್ನೆಲೆಯಲ್ಲಿ ಗ್ರಂಥಾಲಯ, ಪಾರ್ಕ್, ಶೌಚಾಲಯ ನಿರ್ಮಿಸುವ ಕೆಲಸ ಆಗುತ್ತಿದ್ದು, ಆಡಳಿತದ ಮಾದರಿ ಕೆಲಸಗಳು ಇನ್ನಷ್ಟು ಮುಂದುವರಿಯಲಿ ಎಂದು ಶುಭಹಾರೈಸಿದರು.
ಇದೇ ಸಂದರ್ಭ ಉಪ್ಪಿನಂಗಡಿ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಸಾರ್ವಜನಿಕ ಉದ್ಯಾನವಕ್ಕೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ ಶಂಕುಸ್ಥಾಪನೆ ನೆರವೇರಿಸಿದರು.
ಸುನೀಲ್ ಕುಮಾರ್ ದಡ್ಡು, ದೇವಿಪ್ರಸಾದ್, ಜಯಂತ್ ಪೊರಲಿ, ಅದೇಶ್ ಶೆಟ್ಟಿ, ಧನಂಜಯ, ಸುದೇಶ್ ಅತಮಜಲ್, ಚಂದ್ರಾವತಿ, ಉಮೇಶ್ ಶೆಣೈ, ವಿಶ್ವನಾಥ್ ಶೆಟ್ಟಿ, ಗ್ರಾಮಸ್ಥರು ಉಪಸ್ಥಿತರಿದ್ದರು.
.