ಮಂಗಳೂರು-ಮಡ್‌ಗಾಂವ್‌ ರೈಲು ಪುನರಾರಂಭ

ವಾರದಲ್ಲಿ ಆರು ದಿನ ಸಂಚಾರ

ಮಂಗಳೂರು : ಮಂಗಳೂರು-ಮಡಗಾಂವ್ ರೈಲನ್ನು ಪುನರಾರಂಭಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಮಂಗಳೂರು ಸೆಂಟ್ರಲ್‌ನಿಂದ ಮಡಗಾಂವ್ ಜಂಕ್ಷನ್‌ವರೆಗೆ ರೈಲು(10107 / 10108) ಮತ್ತೆ ಸಂಚರಿಸಲಿದೆ. ಭಾನುವಾರ ಹೊರತುಪಡಿಸಿ ವಾರದ ಉಳಿದ ಆರು ದಿನ ಈ ರೈಲಿನ ಸಂಚಾರವಿರುತ್ತದೆ.

ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್‌ನಿಂದ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಬೆಳಗ್ಗೆ 5:15 ಗಂಟೆಗೆ ಹೊರಟು ಅದೇ ದಿನ 12.15ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ರೈಲು ಸಂಖ್ಯೆ 10108 ಮಂಗಳೂರು ಸೆಂಟ್ರಲ್‌ನಿಂದ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ಮಧ್ಯಾಹ್ನ 2.45ಕ್ಕೆ ಹೊರಟು ಜೂ. ಅದೇ ದಿನ ರಾತ್ರಿ 10ಕ್ಕೆ ಮಡ್‌ಗಾಂವ್‌ ತಲುಪಲಿದೆ.































 
 

ಈ ರೈಲು ಕಾನಕೋನ, ಅಸ್ನೋಟಿ, ಕಾರವಾರ, ಅಂಕೋಲಾ, ಗೋಕರ್ಣ ರಸ್ತೆ, ಕುಮಟಾ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಸೇನಾಪುರ, ಕುಂದಾಪುರ, ಬಾರ್ಕೂರು, ಉಡುಪಿ, ಮೂಲ್ಕಿ, ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top