ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜ. 5ರಂದು ತೆಂಕಿಲ ಒಕ್ಕಲಿಗ ಗೌಡ ಸೇವಾ ಸಂಘದ ಚುಂಚಶ್ರೀ ಸಭಾಂಗಣದಲ್ಲಿ ಸಭೆ ನಡೆಯಿತು.
ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣಾ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಸಂಘಟಿಸಿರುವುದೇ ನಮ್ಮೆಲ್ಲರ ಭಾಗ್ಯ. ರಾಜ್ಯದ ಕೇಂದ್ರವಾಗಿ ಪುತ್ತೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಜನರೇ ಪುತ್ತೂರಿನತ್ತ ನೋಡಲಿದ್ದಾರೆ. ಆದ್ದರಿಂದ ಎಲ್ಲರೂ ಜೊತೆಯಾಗಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.


ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೇತೃತ್ವದಲ್ಲಿ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಜಯಂತ್ಯೋತ್ಸವ ಸಂಸ್ಮರಣಾ ಸಮಿತಿ ಸಂಚಾಲಕ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ಅಧ್ಯಕ್ಷ ವಿಶ್ವನಾಥ ಗೌಡ, ಎ.ವಿ.ನಾರಾಯಣ್ ಮೊದಲಾದವರು ಉಪಸ್ಥಿತರಿದ್ದರು.ಒಕ್ಕಲಿಗ ಸ್ವಸಹಾಯ ಟ್ರಸ್ಟಿನ ಪುತ್ತೂರು ತಾಲೂಕಿನ ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
