ಪುತ್ತೂರು: ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸವಣೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಮನೆಮನೆಗೆ ಆಮಂತ್ರಣ ಪತ್ರ ತಲುಪಿಸುವ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ, ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭಾವಚಿತ್ರವುಳ್ಳ ಸ್ಟಿಕ್ಕರನ್ನು ಪ್ರತಿ ಮನೆಮನೆಗೆ ತಲುಪಿಸಿ, ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು.
