ಪುತ್ತೂರು: ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸ್ವ-ಸಹಾಯ ಸಂಘಗಳ ಒಗ್ಗೂಡುವಿಕೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಸಾಂಘಿಕ ನಡೆ ಸಮೃದ್ಧಿಯ ಕಡೆ ತರಬೇತಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಪ್ರತಿಮಾ ಹಾರಾಡಿ, ಮಹಮ್ಮದ್ ಬಡಗನ್ನೂರು ತರಬೇತಿ ನಡೆಸಿಕೊಟ್ಟರು. ತರಬೇತಿಯಲ್ಲಿ ಮುಂಡೂರು, ಬೆಟ್ಟಂಪಾಡಿ ಗ್ರಾಮ ಪಂಚಾಯತ್ನ ಅದ್ಯಕ್ಷರು, ಸ್ಥಾಯಿ ಸಮಿತಿ ಸದಸ್ಯರು, ಪಿಡಿಓ, ಕಾರ್ಯದರ್ಶಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಆಯ್ದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಇದರ ಆಶ್ರಯದಲ್ಲಿ ತರಬೇತಿ ನಡೆಯುತ್ತಿದೆ.