ಪುತ್ತೂರು: ಹಿಂದುತ್ವ ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ನೆಹರೂನಗರ ವಿವೇಕಾನಂದ ಕ್ಯಾಂಪಸ್‍್ನಲ್ಲಿ ಜ. 12ರಂದು ವಿವೇಕಾನಂದ ಜಯಂತಿ ಆಚರಣೆ ಜರಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದ ಎನ್ನುವ ಪರಮ ಸಂತನ ಹೆಸರಿನಲ್ಲಿ ಸಂಸ್ಕಾರವುಳ್ಳ ಹಾಗೂ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ ಬಂದಿದೆ. ವಿದ್ಯಾಸಂಸ್ಥೆಗಳು ಕೇವಲ ಪದವಿ ನೀಡುವುದಲ್ಲ. ವಿದ್ಯಾಸಂಸ್ಥೆಗಳು ಸಾಮಾಜಿಕ ಹಿತ ಕಾಯಬೇಕು, ಸಾಮಾಜಿಕ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂಬ ದೃಷ್ಟಿಕೋನದಿಂದ ವಿವೇಕಾನಂದ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಈ ದಿಸೆಯಲ್ಲಿ ಯಶಸ್ವಿ ಹೆಜ್ಜೆಗಳನ್ನಿಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು ಮುಖ್ಯ ಅತಿಥಿಯಾಗಿ ಭಾರತ ಸರಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವ, ಸಂಸದ ಅನಂತಕುಮಾರ್ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
8 ಸಾವಿರ ಮಂದಿಯ ನಿರೀಕ್ಷೆ
ವಿವೇಕಾನಂದ ಕ್ಯಾಂಪಸ್ಸಿನಲ್ಲಿ ನಡೆಯಲಿರುವ ಈ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜು, ವಿವೇಕಾನಂದ ಪದವಿ ಪೂರ್ವ ಕಾಲೇಜು, ವಿವೇಕಾನಂದ ಸ್ನಾತಕೋತ್ತರ ಕಾಲೇಜು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿAಗ್ ಆಂಡ್ ಟೆಕ್ನಾಲಜಿ, ವಿವೇಕಾನಂದ ಪಾಲಿಟೆಕ್ನಿಕ್, ವಿವೇಕಾನಂದ ಸಿಬಿಎಸ್‌ಸಿ ಹಾಗೂ ವಿವೇಕಾನಂದ ಶಿಶುಮಂದಿರ, ಬಿಎಡ್, ವಿವೇಕಾನಂದ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು, ಆಡಳಿತ ಮಂಡಳಿಯ ಸದಸ್ಯರು ಸೇರಿ ಸುಮಾರು 8 ಸಾವಿರಕ್ಕೂ ಮಿಕ್ಕಿ ಮಂದಿ ಭಾಗವಹಿಸಲಿರುವರು. ಸಭಾ ಕಾರ್ಯಕ್ರಮದ ಅನಂತರ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಕಾಲಕ್ಕೆ ಅನುಗುಣವಾಗಿ ಬದಲಾಗಬೇಕಾದ ಈ ಕಾಲಘಟ್ಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರಸ್ತುತ 2023-24ನೇ ಶೈಕ್ಷಣಿಕ ವರ್ಷದಿಂದ ತನ್ನ 80ನೇಯ ವಿದ್ಯಾ ಸಂಸ್ಥೆಯಾಗಿ ಬಿ ಫಾರ್ಮ್ (ಬ್ಯಾಚುಲರ್ ಆಫ್ ಫಾರ್ಮಸಿ) ಹಾಗೂ ಡಿ ಫಾರ್ಮ (ಡಿಪ್ಲೊಮಾ ಇನ್ ಫಾರ್ಮಸಿ) ಎನ್ನುವ ಫಾರ್ಮಸಿ ಕೋರ್ಸುಗಳನ್ನು ಆರಂಭಿಸಲಿದೆ. ಈ ಕುರಿತು ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ನಿಂದ ಸಮಿತಿಯು ಭೇಟಿ ಸ್ಥಳ ಪರಿಶೀಲನೆ ಮಾಡಿ ಕೋರ್ಸನ್ನು ಆರಂಭಿಸುವುದಕ್ಕೆ ತಾತ್ಕಾಲಿಕ ಸಂಯೋಜನೆಯನ್ನು ನೀಡಿದ್ದು ಕರ್ನಾಟಕ ಸರಕಾರದ ನಿರಕ್ಷೇಪಣಾ ಪ್ರಮಾಣ ಪತ್ರ ಪಡೆಯಲು ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಕೆಲಸಗಳು ಕೂಡಾ ಈಗಾಗಲೆ ಆರಂಭಗೊAಡಿದೆ ಎಂದು ಡಾ. ಪ್ರಭಾಕರ ಭಟ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಕೃಷ್ಣ ಭಟ್ ಉಪಸ್ಥಿತರಿದ್ದರು.