ಗುರುವಾರ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ

ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ

ಬೆಂಗಳೂರು : ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿಯವರು ಗುರುವಾರ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಏಳು ದಿನ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ.

ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.































 
 

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ಎಲ್​​ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದಲ್ಲಿ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top