ಅಗಳಿ ಶ್ರೀ ಸದಾಶಿವ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ | ಜ. 16ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಕಾಣಿಯೂರಿನ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಜ. 11ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ ಮಾಡಲಾಯಿತು.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬುಧವಾರ ಬೆಳಿಗ್ಗೆ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಬುಧವಾರ ಸಂಜೆ ಅಗಳಿ ಶ್ರೀ ಸದಾಶಿವ ಭಜನಾ ಮಂಡಳಿ ಸದಸ್ಯರಿಂದ ಮತ್ತು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ರಾತ್ರಿ ದೇವತಾ ಪ್ರಾರ್ಥಣೆ, ಪ್ರಾಸಾದ ಶುದ್ಧಿ, ಅಂಕುರಾರ್ಪಣೆ ವಾಸ್ತು ರಕ್ಷೆಘ್ನ ಹೋಮ, ವಾಸ್ತು ಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.





























 
 

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಕಟೀಲು ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಯಕ್ಷಗಾನ ಬಯಲಾಟ `ಸಂಪೂರ್ಣ ಶ್ರೀದೇವಿ ಮಹಾತ್ಮೆ’ ನಡೆಯಲಿದೆ.

ಜ. 12ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಅಂಕುರ ಪೂಜೆ, ಬಿಂಬ ಶುದ್ಧಿ, ಕಲಶಾಭಿಷೇಕ, ಪ್ರೋಕ್ತ ಹೋಮ, ಪುಣ್ಚತ್ತಾರು ಶ್ರೀ ಹರಿ ಭಜನಾ ಮಂಡಳಿ ಸದಸ್ಯರಿಂದ ಮತ್ತು ಚಾರ್ವಾಕ ಶ್ರೀ ಕಪಿಲೇಶ್ವರ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ, ಮಧ್ಯಾಹ್ನ ಹೋಮ ಕಲಶಾಭಿಷೇಕ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಕೆಳಗಿನಕೇರಿ ಕೊಪ್ಪ ಶ್ರೀ ಶಾರದಾಂಬಾ ಭಜನಾ ಮಂಡಳಿ ಸದಸ್ಯರಿಂದ ಮತ್ತು ಶಾಂತಿಮೊಗರು ಶ್ರಿ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ, ರಾತ್ರಿ ಶ್ರೀ ದುರ್ಗಾ ನಮಸ್ಕಾರ, ವಸಂತಕಟ್ಟೆ ಪರಿಗ್ರಹಣ, ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮಿತಿಯ ಮಾಜಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು ಮಾದೋಡಿ ಅಧ್ಯಕ್ಷತೆಯನ್ನು ವಹಿಸಲಿದ್ದು, ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ನಳಿನಾಕ್ಷಿ ವಿ.ಆಚಾರ್ಯ ಕಲ್ಮಡ್ಕ ಧಾರ್ಮಿಕ ಭಾಷಣ ಮಾಡಲಿದ್ದಾರೆ. ವಾಸ್ತು ಶಿಲ್ಪ ಶಾಸ್ತ್ರಜ್ಞ ಎಸ್.ಎಂ.ಕೃಷ್ಣಪ್ರಸಾದ್ ಮುನಿಯಂಗಳ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ನ್ಯಾಯವಾದಿ ಪುರಂದರ ಭಟ್ ಸೇರಿದಂತೆ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮರಕ್ಕಡ ಅಂಗನವಾಡಿ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮ, ರಾತ್ರಿ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರಿಂದ ತುಳುನಾಟಕ “ಶಿವದೂತೆ ಗುಳಿಗೆ” ನಡೆಯಲಿದೆ.

ಜ. 13ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಅಂಕುರ ಪೂಜೆ, ಪ್ರಾಯಶ್ಚಿತ ಹೋಮ, ಬೆಳಂದೂರು ವಲಯ ಶ್ರೀ ವಿಷ್ಣುಪ್ರಿಯಾ ಭಜನಾ ಮಂಡಳಿ ಸದಸ್ಯರಿಂದ ಮತ್ತು ಕಲ್ಲಮಾಡ ಶ್ರೀ ಉಳ್ಳಾಕುಲು ಯುವಕ ಮಂಡಲದ ಸದಸ್ಯರಿಂದ ಭಜನಾ ಸೇವೆ, ಮಧ್ಯಾಹ್ನ ಹೋಮ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅಪರಾಹ್ನ ಕುದ್ಮಾರು ಶ್ರೀ ಪಂಚಲಿಂಗೇಶ್ವರ ಮಹಿಳಾ ಮಂಡಳಿ ಸದಸ್ಯರಿಂದ ಮತ್ತು ಅಗಳಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಸದಸ್ಯರಿಂದ ಭಜನಾ ಸೇವೆ, ರಾತ್ರಿ ದುರ್ಗಾನಮಸ್ಕಾರ ಪೂಜೆ, ಅಂಕುರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸೇರಿದಂತೆ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ಅಂಗನವಾಡಿ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮ, ರಾತ್ರಿ ಅಂತರಾಷ್ಟ್ರೀಯ ಯೋಗಪಟು ಪ್ರಣಮ್ಯ ಅಗಳಿ ಇವರಿಂದ ಯೋಗ ಪ್ರದರ್ಶನ ಹಾಗೂ ಶ್ರೀ ಗೋಪಾಲಕೃಷ್ಣ ಕಡೆಂಗ ನೇತೃತ್ವದ ಸೌಂಡ್ಸ್ ಮೆಲೋಡಿ ಪುತ್ತೂರು ಇವರಿಂದ ಭಕ್ತಿ ರಸಮಂಜರಿ ನಡೆಯಲಿದೆ.

ಜ. 14 ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಭಗವತಿ ತ್ರಿಕಾಲ ಪೂಜೆ, ತತ್ವ ಕಲಶ ಪೂಜೆ, ತತ್ವ ಕಲಶ ಹೋಮ, ತತ್ವ ಕಲಶಾಭಿಷೇಕ, ಶ್ರೀ ಕ್ಷೇ.ಧ,ಗ್ರಾ,ಯೋಜನೆ ಬೆಳಂದೂರು ವಲಯದ ಸದಸ್ಯರಿಂದ ಮತ್ತು ಕೊಡಿಮಾರು ಅಬೀರ ಗೆಳೆಯರ ಬಳಗದ ಸಸದಸ್ಯರಿಂದ ಭಜನಾ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸವಣೂರು ಶ್ರವಣರಂಗ ಪ್ರತಿಷ್ಠಾನದವರಿಂದ ಯಕ್ಷಗಾನ ತಾಳಮದ್ದಳೆ, ಭಕ್ತಕೋಡಿ ಶ್ರೀ ರಾಮ ಭಜನಾ ಮಂಡಳಿ ಸದಸ್ಯರಿಂದ ಮತ್ತು ನೆಟ್ಟಣ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಅಗಳಿ ಶ್ರಿ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಕರಂದ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಎಸ್. ಅಂಗಾರ, ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು, ಪುತ್ತೂರು ಆದರ್ಶ ಆಸ್ಪತ್ರೆಯ ವೈದ್ಯರಾದ ಡಾ. ಎಂಕೆ. ಪ್ರಸಾದ್, ಮೈಸೂರು ಫೌಂಡರ್ ಆಫ್ ಸ್ಕ್ಯಾನ್‌ರೇ ಟೆಕ್‌ನೋಲಜಿಸ್‌ನ ವಿಶ್ವಪ್ರಸಾದ್ ಆಳ್ವ ಸೇರಿದಂತೆ ಹಲವಾರು ಮಂದಿ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳಂದೂರು ಅಂಗನವಾಡಿ ಪುಟಾಣಿಗಳಿಂದ ವೈವಿಧ್ಯಮಯ ಕಾರ್ಯಕ್ರಮ, ನಾರ್ಯಬೈಲು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ, ಜೋಕಾಲಿ ಬಳಗ ಕೃಷ್ಣಾಪುರ ಕಾಮಣ ಇದರ ಸದಸ್ಯರಿಂದ ಸುಬ್ಬು ಸಂಟ್ಯಾರು ನಿರ್ದೇಶನದ “ಮುನ್ನೆ ಮುನಿಯೆನಾ” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಜ. 15ರಂದು ಬೆಳಿಗ್ಗೆ ಶ್ರೀ ಗಣಪತಿ ಹೋಮ, ಶ್ರೀ ರಕ್ತೇಶ್ವರಿ ತಂಬಿಲ, ಶ್ರೀ ನಾಗತಂಬಿಲ, ಶತರುದ್ರಾಭಿಷೇಕ, ರುದ್ರಹೋಮ, ಅನುಜ್ಞಾಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಅನುಜ್ಞಾ ಪ್ರಾರ್ಥನೆ, ಕಾಮಣ ಕೃಷ್ಣಾಪುರ ಜೋಕಾಲಿ ಭಜನಾ ಮಂಡಳಿ ಸದಸ್ಯರಿಂದ ಮತ್ತು ಚಾರ್ವಾಕ ಶ್ರೀ ಸಾಕ್ಷಾತ್ ಶಿವ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ ನಡೆಯಲಿದೆ. ಮಧ್ಯಾಹ್ನ ರುದ್ರಹೋಮ, ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಚಾರ್ವಾಕ ಗೋಪಾಲಕೃಷ್ಣ ಪಟೇಲ್ ಇವರ ನೇತೃತ್ವದಲ್ಲಿ ಕಾಣಿಯೂರು ಶ್ರೀ ನರಹರಿ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ, ಅಪರಾಹ್ನ ಪಾದೆ ಬಂಬಿಲ ಶಕ್ತಿನಗರ ಶ್ರೀ ದುರ್ಗಾ ಭಜನಾ ಮಂಡಳಿ, ದೇವಸ್ಯ ಶ್ರೀ ಹರಿ ಭಜನಾ ಮಂಡಳಿ, ಬೆಳಂದೂರು ವಲಯ ಶ್ರೀ ಲಕ್ಷ್ಮೀಪ್ರಿಯ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ, ರಾತ್ರಿ ಅಧಿವಾಸ ಹೋಮ, ಕುಂಭೇಶ ಕರ್ಕರೀ ಕಲಶ ಪೂಜೆ, ಬ್ರಹ್ಮಕಲಶ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ಪುತ್ತೂರು ಮಹಾವೀರ ಆಸ್ಪತ್ರೆಯ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ, ಶ್ರೀ ಕ್ಷೇ. ಧ.ಗ್ರಾ.ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸೇರಿದಂತೆ ಹಲವಾರು ಮಂದಿ ಗಣ್ಯರು ಅತಿಥಿಗಲಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳಂದೂರು ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯ ಪ್ರಶಸ್ತಿ ವಿಜೇತ ಕೊಳಲು ಮಾಂತ್ರಿಕ ಲಿಂಗಪ್ಪ ಗೌಡ ಕಡೆಂಗ ಇವರಿಂದ ಕೊಳಲು ವಾದನ, ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ.

ಜ. 16: ಅಷ್ಟಬಂಧ ಬ್ರಹ್ಮಕಲಶೋತ್ಸವ:

ಜ.16ರಂದು ಬೆಳಿಗ್ಗೆ ಗಣಪತಿ ಹೋಮ, ಸದಾನಂದ ಆಚಾರ್ಯ ತಂಡದವರಿಂದ ಮತ್ತು ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ, ಬೆಳಿಗ್ಗೆ 9-10ರಿಂದ 9-55 ರ ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಶ್ರಿ ಸದಾಶಿವ ದೇವರಿಗೆ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಶ್ರೀ ಉಳ್ಳಾಲ್ತಿ ಭಜನಾ ಮಂಡಳಿ ನಾಲ್ಕಂಭ ಇದರ ಸದಸ್ಯರಿಂದ ಮತ್ತು ನಾವೂರು ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸೇವೆ ನಡೆಯಲಿದೆ. ರಾತ್ರಿ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವದ ಭಂಡಾರ ತೆಗೆಯುವುದು, ರಂಗಪೂಜೆ, ಶ್ರೀ ದೇವರ ಉತ್ಸವ ಬಲಿ, ರಾಜಾಂಗಣ ಪ್ರಾಸಾದ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆಯಲಿದೆ. ಬಳಿಕ ಶ್ರೀ ದೈವಗಳ ನೇಮೋತ್ಸವ, ಕೈಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಮರಕ್ಕಡ, ಪ್ರಧಾನ ಅರ್ಚಕ ಗಣೇಶ್ ಭಟ್ ಮಾಡಾವು, ಅರ್ಚಕ ರಾಮಕೃಷ್ಣ ಭಟ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top