ಪುತ್ತೂರು: ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿಯಾಗಲಿದೆ ಎಂ ಅವರು, ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಶ್ರೀಧರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಆಸ್ತಿ. ಮಾನವೀಯ ಮೌಲ್ಯಗಳನ್ನು ಬೆಳೆಸಿ ಕೂಳ್ಳುವುದರೊಂದಿಗೆ ಹೆತ್ತವರಿಗೆ ಮತ್ತು ಶಿಕ್ಷಕರಿಗೆ ಹಾಗು ಕಾಲೇಜಿಗೆ ಕೀರ್ತಿ ತರಬೇಕು ಎಂದು ಕರೆನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಂಗನಾಥ ರೈ ಗುತ್ತು ಶುಭಹಾರೈಸಿದರು.
ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮಾರಣ್ಣಅವರು ಕಾಲೇಜಿನ ವಿಧ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೊಧಿಸಿದರು.
ಸಹಾಯಕ ಪ್ರಾಧ್ಯಾಪಕ ಅನಂತಭಟ್ ಪ್ರಾರ್ಥಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿ ರಕ್ಷಿತ್ ರೈ ವಂದಿಸಿದರು. ಸಾರ್ಥಕ್ ಟಿ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಚಾಲಕ ಡಾ.ಕಾಂತೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಸಹಕರಿಸಿದರು.
ಪದಾಧಿಕಾರಿಗಳ ಆಯ್ಕೆ
ಉಪಾಧ್ಯಕ್ಷ- ಸಿಂಚನ ಅಂತಿಮ ಬಿಬಿಎ. ಕಾರ್ಯದರ್ಶಿ- ಹರೀಶ್ ಚಂದ್ರ ಅಂತಿಮ ಬಿಎ. ಹಾಗೂ ೨೦೨೨-೨೩ ನೇ ಸಾಲಿನ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ- ಸಾರ್ಥಕ್ ಟಿ. ಅಂತಿಮ ಬಿಕಾಂ. ಜತೆ ಕಾರ್ಯದರ್ಶಿ- ದಿವ್ಯ ಎಂ ಅಂತಿಮ ಬಿಎಸ್ಸಿ. ಕ್ರೀಡಾ ಕಾರ್ಯದರ್ಶಿ- ದೀಕ್ಷಿತ್ ರೈ ಅಂತಿಮ ಬಿಎ. ಜತೆ ಕಾರ್ಯದರ್ಶಿ- ದಿಶಾ ರೈ ದ್ವಿತೀಯ ಬಿಎಸ್‌ಡಬ್ಲೂ ಅಯ್ಕೆಯಾಗಿದ್ದಾರೆ.