ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಗುರುವಾರ ಸುಳ್ಯದಲ್ಲಿ ನಡೆಯಿತು.
ಮೀನುಗಾರಿಕಾ ಸಚಿವ ಎಸ್. ಅಂಗಾರ ಮಾತನಾಡಿ, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಎಲ್ಲರೂ ಜೊತೆಯಾಗಿ ಸಂಘಟನೆಯ ಕಾರ್ಯದಲ್ಲಿ ತೊಡಗಿಕೊಂಡಾಗ, ಪಕ್ಷ ತಳಮಟ್ಟದಿಂದಲೇ ಬಲಯುತಗೊಳ್ಳುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರೈ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.