ಪುತ್ತೂರು: ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಯುವ ಸಪ್ತಾಹ ವಿವೇಕ ರಥ – ಯುವ ಪಥ, ತಾಲೂಕು ಯುವ ಪ್ರಶಸ್ತಿ ಪ್ರದಾನ ಸಮಾರಂಭ ಜ. 14ರಂದು ಬೆಳಿಗ್ಗೆ 10ರಿಂದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ಉಳಯ ಯುವ ಸಂದೇಶ ನೀಡಲಿದ್ದಾರೆ.
ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ., ಪೊಲೀಸ್ ಉಪಾಧೀಕ್ಷಕ ಡಾ. ವೀರಯ್ಯ ಹಿರೇಮಠ್, ತಹಸೀಲ್ದಾರ್ ನಿಸರ್ಗಪ್ರಿಯ, ತಾಪಂ ಇಓ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ನಗರಸಭೆ ಸದಸ್ಯ ಜಗನ್ನಿವಾಸ್ ರಾವ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ. ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೋಡೆಲ್ ಅಧಿಕಾರಿ ಮಾಮಚ್ಚನ್ ಎಂ., ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಮುಖ್ಯ ಅತಿಥಿಯಾಗಿರುವರು ಎಂದು ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.