ಪುತ್ತೂರು: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಅಯೋಜಿಸುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಮಂಗಳೂರು ನೆಹರು ಯುವ ಕೇಂದ್ರದ ಪ್ರತಿನಿಧಿಯಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಿರಣ್ ಕೆ. ಆಯ್ಕೆಯಾಗಿದ್ದಾರೆ.
ಇವರು ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನುಪ್ರತಿನಿಧಿಸಲಿದ್ದಾರೆ. 26ನೇ ರಾಷ್ಟ್ರೀಯ ಯುವಜನೋತ್ಸವವು ಈ ಭಾರೀ ಕರ್ನಾಟಕದಲ್ಲಿ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ದೇಶದ ಎಲ್ಲಾ ರಾಜ್ಯಗಳ ಯುವಜನರು ಭಾಗವಹಿಸಲಿದ್ದಾರೆ ಎಂದು ನೆಹರು ಯುವಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಪರ್ ಪೇಟೆ ನೀಡಿದ್ದಾರೆ.