ಇನ್ನು ಕೆಲವೇ ದಿನಗಳಲ್ಲಿ ಭೂಗರ್ಭದೊಳಗೆ ಸೇರಲಿದೆ ಜೋಶಿಮಠ

ಇಸ್ರೊ ಉಪಗ್ರಹ ಚಿತ್ರದಲ್ಲಿ ಭೂ ಕುಸಿತದ ಕಳವಳಕಾರಿ ಚಿತ್ರಗಳು ಸೆರೆ

ಹೊಸದಿಲ್ಲಿ : ಇನ್ನು ಕೆಲವೇ ದಿನಗಳಲ್ಲಿ ಜೋಶಿಮಠವೆಂಬ ಹಿಮಾಲಯದ ತಪ್ಪಲಿನ ಊರು ಭೂಗರ್ಭ ಸೇರಲಿದೆ. ಸತತ ಭೂಕುಸಿತದಿಂದಾಗಿ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಜೋಶಿಮಠದ ಆಯುಷ್ಯ ಇನ್ನು ಕೆಲವೇ ದಿನ ಎಂದು ಭವಿಷ್ಯ ನುಡಿದಿದೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ).

ಇಸ್ರೊ ಜೋಶಿಮಠದ ಉಪಗ್ರಹ ಚಿತ್ರಗಳನ್ನು ಮತ್ತು ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಈ ಚಿತ್ರದ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ.
ಚಿತ್ರಗಳನ್ನು ಕಾರ್ಟೊಸ್ಯಾಟ್-2ಎಸ್ ಉಪಗ್ರಹದಿಂದ ತೆಗೆಯಲಾಗಿದೆ. ಹೈದರಾಬಾದ್ ಮೂಲದ ಎನ್ಆರ್‌ಎಸ್‌ಸಿ ಮುಳುಗುತ್ತಿರುವ ಪ್ರದೇಶಗಳ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಿತ್ರಗಳಲ್ಲಿ ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಸ್ಥಾನ ಸೇರಿದಂತೆ ಇಡೀ ಪಟ್ಟಣವನ್ನು ಸೂಕ್ಷ್ಮ ವಲಯ ಎಂದು ಗುರುತಿಸಲಾಗಿದೆ.
ಇಸ್ರೊದ ಪ್ರಾಥಮಿಕ ವರದಿಯ ಆಧಾರದ ಮೇಲೆ, ಉತ್ತರಾಖಂಡ ಸರಕಾರ ಅಪಾಯಕಾರಿ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿದೆ. ಈ ಪ್ರದೇಶಗಳಲ್ಲಿರುವ ಜನರನ್ನು ಆದ್ಯತೆಯ ಮೇಲೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಮಾಡುತ್ತಿದೆ.





































 
 

ವರದಿಯ ಪ್ರಕಾರ, 2022ರ ಏಪ್ರಿಲ್ ಮತ್ತು ನವೆಂಬರ್ ನಡುವೆ ಭೂಮಿಯ ಕುಸಿತ ಶುರುವಾಗಿತ್ತು. ಈ ಸಮಯದಲ್ಲಿ ಜೋಶಿಮಠ 8.9 ಸೆಂ.ಮೀ ಕುಸಿದಿದೆ. ಆದರೆ 2022ರ ಡಿಸೆಂಬರ್ 27ರಿಂದ 2023 ಜನವರಿ 8ರ ನಡುವೆ, ಭೂಮಿಯ ಕುಸಿತದ ತೀವ್ರತೆ ಹೆಚ್ಚಾಗಿದೆ. ಈ 12 ದಿನಗಳ ಅಂತರದಲ್ಲಿ ಪಟ್ಟಣ 5.4 ಸೆಂ.ಮೀ ನಷ್ಟು ಕುಸಿದಿದೆ.
ಭೂ ಕುಸಿತದಿಂದ ಜೋಶಿಮಠ-ಔಲಿ ರಸ್ತೆಯೂ ನಾಶವಾಗಲಿದೆ ಎಂದು ಇಸ್ರೋ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.ಪಟ್ಟಣದಲ್ಲಿ ಭೂಮಿ ಕುಸಿದ ನಂತರ ಮನೆ, ರಸ್ತೆಗಳಲ್ಲಿ ಕಾಣಿಸಿಕೊಂಡ ಬಿರುಕುಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದರೂ ಇಸ್ರೋದ ಪ್ರಾಥಮಿಕ ವರದಿಯಲ್ಲಿ ಕಂಡು ಬಂದಿರುವುದು ಭಯ ಹುಟ್ಟಿಸುವಂತಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top