ವಿದೇಶಗಳಲ್ಲಿ ಫ್ಲ್ಯಾಟ್ ಸೇರಿ ಅಪಾರ ಆಸ್ತಿ ಖರೀದಿ
ಮಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಉದ್ಯಮಿಯೊಬ್ಬರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿ ಜಾರಿ ನಿರ್ದೇಶನಾಲಯ(ಇಡಿ) ಆದೇಶ ಹೊರಡಿಸಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 17 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಮಂಗಳೂರಿನ ಮುಕ್ಕ ಗ್ರೂಪ್ ಆಫ್ ಕಂಪನಿಸ್ನ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ.
ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಆಧಾರದಲ್ಲಿ ಇಡಿ ಪ್ರಕರಣದ ತನಿಖೆ ನಡೆಸಿತ್ತು. ತನಿಖೆಯ ಸಂದರ್ಭದಲ್ಲಿ, ಹ್ಯಾರಿಸ್ ಯುಎಇಯಲ್ಲಿ ಫ್ಲಾಟ್ ಹೊಂದಿರುವುದು. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಹೂಡಿಕೆ ಮಾಡಿರುವುದು ಕಂಡು ಬಂದಿತ್ತು.