ಪುತ್ತೂರು: ತಾಲೂಕು ಪಂಚಾಯತ್ ಪುತ್ತೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ, ಯುವ ಸಪ್ತಾಹ, ವಿವೇಕ ರಥ-ಯುವ ಪಥ ಹಾಗೂ ತಾಲೂಕು ಯುವ ಮಂಡಲ ಪ್ರಶಸ್ತಿ ಪ್ರದಾನ ಸಮಾರಂಭವು ಜ. 14ರಂದು ನೆಹರು ನಗರದ ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಿತು
ವಿಷ್ಣು ಯುವಕ ಮಂಡಲ ಮಜ್ಜಾರಡ್ಕ, ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ನವೋದಯ ಮಹಿಳಾ ಮಂಡಲ ಬನ್ನೂರು, ಸ್ಪೂರ್ತಿ ಮಹಿಳಾ ಮಂಡಲ ಹಾಗೂ ವೈಯಕ್ತಿಕ ವಿಭಾಗದ ಪ್ರಶಸ್ತಿಗಳಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮನು ಕುಮಾರ್, ಕ್ರೀಡೆಯಲ್ಲಿ ನಿಶ್ಚಲ್ ಕೆ.ಜೆ., ಯುವ ಜನತೆಯಲ್ಲಿ ಹರಿಪ್ರಸಾದ್, ಧಾರ್ಮಿಕದಲ್ಲಿ ಮನ್ಮಥ ಶೆಟ್ಟಿ, ಕ್ರೀಡೆಯಲ್ಲಿ ಧನ್ವಿ ಜೆ.ರೈ, ಸಾಹಿತ್ಯದಲ್ಲಿ ಅಪೂರ್ವ ಕಾರಂತ್ ಹಾಗೂ ಸಂಘಟನೆಯಲ್ಲಿ ರಾಜೇಶ್ ಮಯೂರ ಅವರಿಗೆ 2021-22ನೇ ಸಾಲಿನ ತಾಲೂಕು ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಮೇಶ್ ಉಳಯ ಯುವ ಸಂದೇಶ ನೀಡಿದರು.ವಿವೇಕಾನಂದ ವಿದ್ಯಾವರ್ದಕ ಸಂಘದ ಕಾರ್ಯದರ್ಶಿ ಕೆ.ಎಂ ಕೃಷ್ಣ ಭಟ್, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು.
ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ಸ್ವಾಗತಿಸಿದರು. ತಾಲೂಕು ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಮೀದ್ ಸಾಜ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು