ಮತ್ತೆ ಬಂದ ಮಾಸ್ಕ್‌, ಸ್ಯಾನಿಟೈಸರ್‌, ಸೋಷಿಯಲ್‌ ಡಿಸ್ಟನ್ಸ್‌

ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಗೊಳಿಸಿ ಆದೇಶ

ತಿರುವನಂತಪುರ : ಕೊರೊನ ವೈರಸ್‌ನ ಹೊಸ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯದಲ್ಲಿರುವುದರಿಂದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೇಳಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಪಾಲಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಜನರಿಗೆ ನಿರ್ದೇಶನ ನೀಡಿದೆ.

ಇದಲ್ಲದೆ ಜನರಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ಕಾರ್ಯಕ್ರಮಗಳ ಸಂಘಟಕರಿಗೆ ನಿರ್ದೇಶನ ನೀಡಿದೆ. ಕೋವಿಡ್ ಉಲ್ಬಣದ ಬಗ್ಗೆ ಆತಂಕದ ನಡುವೆ ಹೊರಡಿಸಲಾದ ಆದೇಶವು ಮುಂದಿನ 30 ದಿನಗಳವರೆಗೆ ರಾಜ್ಯದ ಎಲ್ಲಾ ಭಾಗಗಳಲ್ಲಿ ಜಾರಿಯಲ್ಲಿರುತ್ತದೆ.



































 
 

ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ ಡೇಟಾ ಪ್ರಕಾರ, US ನಲ್ಲಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾದ XBB.1.5 ರೂಪಾಂತರದ ಪ್ರಕರಣಗಳ ಸಂಖ್ಯೆಯು ಭಾರತದಲ್ಲಿ 26ಕ್ಕೆ ಏರಿದೆ. ದಿಲ್ಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ XBB.1.5 ರೂಪಾಂತರದ ಪ್ರಕರಣಗಳು ಕಂಡುಬಂದಿವೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top