ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಶಾಸಕ ಸಂಜೀವ ಮಠಂದೂರು ಅವರಿಂದ ಜಯಂತ್ಯೋತ್ಸವ ಸಂಸ್ಮರಣೆಯ ಆಮಂತ್ರಣ

ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಆಮಂತ್ರಣವನ್ನು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಸಂಸ್ಮರಣಾ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಅವರು ಸಂಸ್ಥಾನದಲ್ಲಿ ನೀಡಿದರು.

ಜ. ೨೨ರಂದು ನಡೆಯುವ ಕಾರ್ಯಕ್ರಮಕ್ಕೆ ಮೊದಲನೆ ದಿನ ಆಗಮಿಸಲಿರುವ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ. ಮರುದಿನ ಬೆಳಗ್ಗೆಯಿಂದಲೇ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ.

ಸಂಸ್ನರಣಾ ಸಮಿತಿಯ ಆರ್ಥಿಕ ಸಮಿತಿ ಸಂಚಾಲಕ ಯು.ಪಿ ರಾಮಕೃಷ್ಣ ಗೌಡ, ಬೆಂಗಳೂರು ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃಧಿ ಸಂಘದ ನಿರ್ದೇಶಕ ಲಕ್ಷ್ಮೀ ನಾರಾಯಣ ಗೌಡ  ಐವರ್ನಾಡು, ದಕ್ಷಿಣ ಕನ್ನಡ ಕೊಡಗು ಗೌಡ ಸಂಘದ ಕಾರ್ಯದರ್ಶಿ ನಾಗೇಶ್ ಕುಮಾರ್ ಕಲಮೋಟ್ಟು ಹಾಗೂ  ಯೋಗೀಶ್ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top