ಪುತ್ತೂರು: ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಂಜೂರು ಪಂಜ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ವಲಯ ಮೇಲ್ವಿಚಾರಕ ಹರೀಶ್ ಕುಲಾಲ್ ಹಾಗೂ ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಅವರ ಸಹಕಾರದೊಂದಿಗೆ ಸ್ವಚ್ಛತೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರದೀಪ್ ಕೃಷ್ಣ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರು ಉಪಸ್ಥಿತರಿದ್ದರು, ಸೇವಾಪ್ರತಿನಿಧಿ ಆಶಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.