ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಪರೀಕ್ಷೆ ದಿನಾಂಕದಲ್ಲಿ ಒಂದು ಪರಿಷ್ಕರಣೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಮಾರ್ಚ್​ 31ರಿಂದ ಏಪ್ರಿಲ್ 15ರ ವರೆಗೆ 10ನೇ ತರಗತಿಯ ಪರೀಕ್ಷೆಗಳು ನಡೆಯಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್‌ತಾಣದಲ್ಲಿದೆ.
ಏಪ್ರಿಲ್ 4 ರಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ಈಗ ಏಪ್ರಿಲ್ 3 ರಂದು ನಡೆಯಲಿವೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ































 
 

ಮಾರ್ಚ್​ 31 ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ
ಏಪ್ರಿಲ್ 3 ರಂದು ಗಣಿತ, ಸಮಾಜ ಶಾಸ್ತ್ರ
ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ
ಏಪ್ರಿಲ್ 8 ರಂದು ಅರ್ಥಶಾಸ್ತ್ರ
ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್
ಏಪ್ರಿಲ್ 15ರಂದು ಸಮಾಜ ವಿಜ್ಞಾನ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top