ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ನೂತನ ರಥ ಸಮರ್ಪಣೆ, 108 ತೆಂಗಿನಕಾಯಿ ಮಹಾಗಣಪತಿ ಹೋಮ ಜ. 20ರಿಂದ 23ರವರೆಗೆ ನಡೆಯಲಿದೆ.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ. 14ರಂದು ಗೊನೆ ಮುಹೂರ್ತ ನಡೆದಿದ್ದು, 15ರಂದು ನೂತನ ರಥ ಆಗಮಿಸಿದೆ.
ಜ. 21ರಂದು ಬೆಳಿಗ್ಗೆ 7.30ಕ್ಕೆ ದೇವತಾ ಪ್ರಾರ್ಥನೆ ನಡೆದು, 8ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ, ನಾಗನಕಟ್ಟೆಯಲ್ಲಿ ಕಲಶಾಭಿಷೇಕ, ತಂಬಿಲ ಸೇವೆ, ಮಹಾವಿಷ್ಣು ಆರಾಧನೆ, ಆಶ್ಲೇಷ ಬಲಿ ಪೂಜೆ, ಬೆಳಿಗ್ಗೆ 11ಕ್ಕೆ ಗಣಪತಿ ಹೋಮ ಪೂರ್ಣಾಹುತಿ ನಡೆಯಲಿದೆ. 11.30ಕ್ಕೆ ನೂತನ ರಥ ಸಮರ್ಪಣೆ, ರಥದಲ್ಲಿ ಕಲಶಾಭಿಷೇಕ, ಮಂಗಳಾರತಿ ನಡೆದು ಮಹಾಪೂಜೆ ನಡೆಯಲಿದೆ. ಸಂಜೆ 6ಕ್ಕೆ ದುಗ್ಗಳದಿಂದ ಶ್ರೀ ಇರ್ವೆರು ಉಳ್ಳಾಕ್ಲು ದೈವದ ಭಂಡಾರ ಆಗಮನಗೊಂಡು ನಾಲಕದಿಂದ ಶ್ರೀ ರಾಜನ್ ದೈವದ ಭಂಡಾರವು ಶ್ರೀ ದೇವರ ಸನ್ನಿಧಿಗೆ ಆಗಮಿಸಲಿದೆ. ರಾತ್ರಿ 7.30ರಿಂದ ಮಹಾಪೂಜೆ, ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ನೂತನ ರಥದಲ್ಲಿ ಶ್ರೀ ದೇವರ ಉತ್ಸವ, ವಸಂತಕಟ್ಟೆ ಪೂಜೆ, ಅಶ್ವತ್ಥ ಕಟ್ಟೆ ಪೂಜೆ, ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.
ಜ. 22ರಂದು ಬೆಳಿಗ್ಗೆ 8ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಲಿ ಉತ್ಸವ, ಪಲ್ಲಕ್ಕಿ ಉತ್ಸವ, ನೂತನ ರಥದಲ್ಲಿ ಶ್ರೀ ದೇವರ ಉತ್ಸವ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 12ರಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2ಕ್ಕೆ ಇರ್ವೆರು ಉಳ್ಳಾಕ್ಲು ಭಂಡಾರ ದುಗ್ಗಳಕ್ಕೆ ನಿರ್ಗಮಿಸಲಿದೆ. ರಾತ್ರಿ 7ಕ್ಕೆ ರಂಗಪೂಜೆ ನಡೆದು, ವ್ಯಾಘ್ರ ಚಾಮುಂಡಿ, ವಾರಾಹಿ ದೈವದ ನೇಮ, ಕಾಣಿಕೆ ಹರಕೆ ಸಮರ್ಪಣೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಜ. 23ರಂದು ಬೆಳಿಗ್ಗೆ 6ರಿಂದ ಶ್ರೀ ರಕ್ತೇಶ್ವರಿ, ಧೂಮ್ರ – ಧೂಮಾವತಿ ಮತ್ತು ಶಿರಾಡಿ ದೈವಗಳ ನೇಮ ನಡಾವರಿ, ಕಾಣಿಕೆ ಹರಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಜ. 20ರಂದು ರಾತ್ರಿ 8.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮ ಉದ್ಘಾಟಿಸುವರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಿರಾಜ ಪಾಂಬಾರು ಅಧ್ಯಕ್ಷತೆ ವಹಿಸುವರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮುಖ್ಯ ಅತಿಥಿಯಾಗಿರುವರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳೀಕೃಷ್ಣ ಹಸಂತಡ್ಕ, ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ಯಾಮಸುಂದರ ರೈ ಕೆರೆಮೂಲೆ, ಉತ್ಸವ ಸಮಿತಿ ಅಧ್ಯಕ್ಷ ತೀರ್ಥಾನಂದ ಗೌಡ ದುಗ್ಗಳ ಉಪಸ್ಥಿತರಿರುವರು. ಜ. 21ರಂದು ಸಂಜೆ 6ರಿಂದ ಭಜನೆ ಹಾಗೂ ಕುಣಿತ ಭಜನೆ ನಡೆಯಲಿದೆ. ಜ. 20ರಂದು ಸಂಜೆ 6ರಿಂದ ಹಾಗೂ ಜ. 21ರಂದು ರಾತ್ರಿ 10ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.