ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಾಲಾಲಯಕ್ಕೆ ಭೂಮಿಪೂಜೆ

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದ ಭೂಮಿ ಪೂಜೆ ಸೋಮವಾರ ನಡೆಯಿತು.
ದೇವಸ್ಥಾನದ ಅರ್ಚಕ, ಆನುವಂಶೀಯ ಮೊಕ್ತೇಸರ ಜನೇಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಫೆ. 1-3: ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ
ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಾಲಯದ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಫೆ. 1ರಿಂದ ಫೆ. 3ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top