ಪುತ್ತೂರು: ಸಂತಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ| ಡಾ| ಆಂಟನಿಪ್ರಕಾಶ್ ಮೊಂತೆರೊರವರು“ವಿದ್ಯಾರ್ಥಿಗಳು ತಮ್ಮ ವರ್ತನೆ, ವ್ಯಕ್ತಿತ್ವ ಮತ್ತು ಭಾಷೆಯ ಮೇಲೆ ಮುಖ್ಯವಾಗಿ ಗಮನ ಹರಿಸಬೇಕು. ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಮತ್ತು ಆಧ್ಯಾತ್ಮಿಕ ದೃಷ್ಟಿಕೋನಗಳನ್ನು ಅರ್ಥಪೂರ್ಣವಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ, ವಿದ್ಯಾರ್ಥಿಗಳು ಪಠ್ಯ,ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಹೃದಯ, ಬುದ್ಧಿ ಮತ್ತು ದೇಹಕ್ಕೆ ತರಬೇತಿ ನೀಡುವತ್ತ ಗಮನ ಹರಿಸಬೇಕು” ಎಂದು ಹೇಳಿದರು.
ಈ ಸಂರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ.ಗಣೇಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆಯನ್ನು ಹಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ಕೊಟ್ಟರು. ಶ್ರೀಮತಿ ಶ್ರೀರಕ್ಷಾ ಸಹಾಯಕ ಪ್ರಾಧ್ಯಾಪಕಿ ವಾಣಿಜ್ಯ ವಿಭಾಗ ಸ್ವಾಗತಿಸಿದರು. ವಿದ್ಯಾರ್ಥಿಕಲ್ಯಾಣ ಸಮಿತಿಯ ಸಂಚಾಲಕರಾದ ಶ್ರೀ ಶೀತಲ್ ಕುಮಾರ್ ಕೆ ವಿ ರವರು ವಂದಿಸಿದರು. ವಿದ್ಯಾರ್ಥಿಕಲ್ಯಾಣ ಸಮಿತಿಯ ಸದಸ್ಯರಾದ ಉಪನ್ಯಾಸಕಿ ಪೃಥ್ವಿ ಕಾರ್ಯಕ್ರಮ ನಿರ್ವಹಿಸಿದರು. ಸಮಾಜ ಕಾರ್ಯವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಪ್ರತಿಭಾ ಸಹಕರಿಸಿದರು.