ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ಜಿಲ್ಲೆಯ ನಂ.1 ಸೇವಾ ಪುರಸ್ಕಾರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸುಳ್ಯದ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಆರೋಗ್ಯ ಭಾರತ್ -ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ (AB-PMJAY-ArK)) ಅತ್ಯುತ್ತಮ ಸೇವಾ ಪುರಸ್ಕಾರ ದೊರೆತಿದೆ.

ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರವಿ ಕುಮಾರ್ ಅವರಿಂದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್ ಪ್ರಶಂಸನಾ ಪತ್ರ ಸ್ವೀಕರಿಸಿದರು. ಈ ವೇಳೆ ಮೆಡಿಕಲ್ ಕಾಲೇಜಿನ ರಿಜಿಸ್ಟ್ರಾರ್ ಡಾ. ಸಂದೇಶ್ ರೈ ಕುತ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

ನಿರಂತರ ಆರೋಗ್ಯ ಸೇವೆ:
ನಮ್ಮ ವೈದ್ಯರು, ಸಿಬ್ಬಂದಿ ತಂಡ ಕರೋನಾದಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ನಿರಂತರವಾಗಿ ಆರೋಗ್ಯ ಸೇವೆ ನೀಡಿದ್ದರು. ತಮ್ಮ ಪ್ರಾಣದ ಹಂಗನ್ನು ತೊರೆದು ಕೆಲಸ ಮಾಡಿದ್ದರು. ಇದೆಲ್ಲದರ ಫಲವಾಗಿಯೇ ಇಂದು ಸಂಸ್ಥೆಗೆ ಇಷ್ಟು ದೊಡ್ಡ ಗೌರವ ಸಿಕ್ಕಿದೆ.
ಡಾ| ಕೆವಿ ಚಿದಾನಂದ, ಅಧ್ಯಕ್ಷ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್































 
 

ವೈದ್ಯರ ಕೆಲಸ ಬಗ್ಗೆ ಹೆಮ್ಮೆ
ನಮ್ಮ ವೈದ್ಯರ ತಂಡದ ಕೆಲಸದ ಬಗ್ಗೆ ಹೆಮ್ಮೆ ಎನಿಸುತ್ತಿದೆ. ಅವರೆಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ನೀಲಾಂಬಿಕೈ ನಟರಾಜನ್, ಡೀನ್

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top