ಪ್ರಜಾಪ್ರಭುತ್ವ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಮಾದರಿ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ಗಣರಾಜ್ಯೋತ್ಸವ ಎಂದರೆ ಉತ್ಸವ ಎಂದರ್ಥ. ಪ್ರಜಾಪ್ರಭುತ್ವದ ಹಿನ್ನೆಲೆ, ಸಂವಿಧಾನದ ನೀತಿ ನಿಯಮಗಳನ್ನು ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು, ಪ್ರಜೆಗಳಿಗೆ ಗಣರಾಜ್ಯೋತ್ಸವವು ತಿಳಿಸುತ್ತದೆ. ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಭಾರತದ ಆರ್ಥಿಕ ವ್ಯವಸ್ಥೆಯು ಹಿಂದುಳಿದಿತ್ತು. ಆದರೆ ಈಗ ವಿಶ್ವದಲ್ಲೇ ಭಾರತ ಅತಿ ಹೆಚ್ಚು ಆರ್ಥಿಕವಾಗಿ ಬೆಳೆದು ನಿಂತಿದೆ. ಅಲ್ಲದೆ ಭಾರತದ ಅಭಿವೃದ್ಧಿಗಾಗಿ ಪ್ರಕೃತಿಯ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಗೊಳಿಸುವುದು ನಮ್ಮ ಕರ್ತವ್ಯ. ಒಳ್ಳೆಯ ಆಚಾರ ವಿಚಾರಗಳನ್ನು ಅಳವಡಿಸಿಕೊಂಡು ಸ್ವಾಸ್ಥ್ಯ ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು. ಹಾಗೇ ಭಾರತದ ಪ್ರಜೆಗಳಾದ ನಾವು ನಮ್ಮ ಜವಾಬ್ದಾರಿಯನ್ನು ಹೊತ್ತು ದೇಶಕ್ಕೆ ಮಾದರಿಯಾಗಬೇಕೆಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.

ಅವರು ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ), ವಿವೇಕಾನಂದ ಪದವಿ ಪೂರ್ವಕಾಲೇಜು ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ)ಯ ಸಹಭಾಗಿತ್ವದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ವಿವೇಕಾನಂದ ಪದವಿ, ಪದವಿಪೂರ್ವ ಕಾಲೇಜು ಮತ್ತು ಸಿಬಿಎಸ್ಇ ಶಾಲೆಯ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು, ಅಧ್ಯಾಪಕರು ಮತ್ತುಅಧ್ಯಾಪಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು , ಎನ್ಎಸ್ಎಸ್ , ಎನ್ ಸಿ ಸಿ , ರೋವರ್ಸ್  ಮತ್ತುರೇಂಜರ್ಸ್ ಮತ್ತು ರೆಡ್ಕ್ರಾಸ್ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.































 
 

ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top