ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ದ.ಕ. ಜಿಲ್ಲಾ ಮರಾಠಿ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಪುತ್ತೂರು ನಗರಸಭೆ, ಸರಕಾರಿ ಆಸ್ಪತ್ರೆ ಹಾಗೂ ಸ್ಟಾರ್ ಒಪ್ಟಿಕಲ್ಸ್ ಸಹಕಾರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಜ. 30 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00ರವರೆಗೆ ನಗರಸಭೆ ಕಟ್ಟಡದ 2ನೇ ಮಹಡಿಯಲ್ಲಿ ನಡೆಯಲಿದೆ.
ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ., ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಬಾಲಚಂದ್ರ,, ಪೌರಾಯುಕ್ತ ಮಧು ಎಸ್. ಮನೋಹರ್, ರೋ.ಎ.ಜಗಜೀವನ್ ದಾಸ್ ರೈ, ರೋ.ಹರ್ಷಕುಮಾರ್ ರೈ ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.