ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.3 ಹಾಗೂ 4 ರಂದು ನಡೆಯುವ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಶುಕ್ರವಾರ ಬೆಳಿಗ್ಗೆ ನಡೆಯಿತು.


ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರ್ಚಕ ಸದಾಶಿವ ಹೊಳ್ಳ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಪತಿ ಬೈಪಡಿತ್ತಾಯ, ಶ್ರೀಧರ ಬೈಪಡಿತ್ತಾಯ, ಸದಸ್ಯರು, ಊರ ಭಕ್ತಾಧಿಗಳು ಉಪಸ್ಥಿತರಿದ್ದರು.