ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಹೊನಲು ಬೆಳಕಿನ 30ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಬೆಳಿಗ್ಗೆ ಚಾಲನೆ ನೀಡಲಾಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಿದ್ದರು. ಈ ಸಂದರ್ಭದಲ್ಲಿ ಕಂಬಳ ಸಮಿತಿ ಗೌರವ ಮಾರ್ಗದರ್ಶಕರಾದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಸಂಚಾಲಕ ಎನ್.ಸುಧಾಕರ ಶೆಟ್ಟಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಂತ ಫಿಲೋಮಿನಾ ಕಾಲೇಜ್ ಪ್ರಾಂಶುಪಾಲ ಆಂಟನಿ ಪ್ರಕಾಶ್ ಮೊಂತೆರೋ, ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಪಿ.ವಿ., ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಉಪಾಧ್ಯಕ್ಷ ಯೋಗೀಶ್ ಸಾಮಾನಿno ಸಂಪಿಗೆದಡಿ, ಸದಸ್ಯರಾದ ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.