ಪುತ್ತೂರು: ನರಿಮೊಗರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ ಜ. 28ರಂದು ನಡೆಯಿತು.


ಶಾಸಕ ಸಂಜೀವ ಮಠಂದೂರು ಮಾತನಾಡಿ, ಕಳೆದ 5 ವರ್ಷಗಳಲ್ಲಿ ಪುತ್ತೂರು ಕ್ಷೇತ್ರದ 111 ಸರಕಾರಿ ಶಾಲೆಗಳಿಗೆ ಕೊಠಡಿ, ಸ್ಮಾರ್ಟ್ ಕ್ಲಾಸ್, ಬೆಂಚು, ಡೆಸ್ಕ್ ನೀಡುವ ಕೆಲಸ ಆಗಿದೆ. ಶಾಲೆಗಳಿಗೆ ಮೂಲಸೌಲಭ್ಯಗಳನ್ನು ನೀಡುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವ ಕೆಲಸ ಆಗಿದೆ ಎಂದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣರಾಜ ಜೈನ್, ನಳಿನಿ ಲೋಕಪ್ಪ ಗೌಡ, ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಜೋಗಿ, ಜುಸ್ಥಿನ ಡಿಸೋಜ ಉಪಸ್ಥಿತರಿದ್ದರು.